ಭೀಕರ ರಸ್ತೆ ಅಪಘಾತ; ಬೈಕ್ ಸವಾರನ ಸ್ಥಿತಿ ಚಿಂತಾಜನಕ

ಭೀಕರ ರಸ್ತೆ ಅಪಘಾತ; ಬೈಕ್ ಸವಾರನ ಸ್ಥಿತಿ ಚಿಂತಾಜನಕ

ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಹೊರವಲಯದಲ್ಲಿ ಬೈಕ್ ಸ್ಕಿಡ್ ಆಗಿ ಚಲಿಸಿದ್ದರಿಂದ ಅಪಘಾತವೊಂದು ಸಂಭವಿಸಿದ್ದು, ಈ ಘಟನೆಯಲ್ಲಿ ಮಹಾರಾಷ್ಟ್ರದ ಮೀರಜ್ ತಾಲೂಕಿನ ಬಸನಗೌಡ ಪಾಟೀಲ್ (50) ಎಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಸ್ಥಳೀಯರ ಮಾಹಿತಿ ಪ್ರಕಾರ ತಿಳಿದುಬಂದಿದೆ. ಈ ರಸ್ತೆ ಅಪಘಾತದಲ್ಲಿ ಸವಾರನ ತಲೆಗೆ ಭಾರಿ ಪೆಟ್ಟಾಗಿದ್ದರಿಂದ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೀರಜ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.