ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.ಐದು ದಿನಗಳ ಕಾಲ ಆಚರಣೆಗೆ ಅನುಮತಿ ನೀಡಲಾಗಿದೆ. ಆದರೆ ಸರ್ಕಾರ ಸೂಚಿಸಿದ ಕಡೆಯೇ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಲಾಗಿದೆ. ಗಣೇಶೋತ್ಸವದಲ್ಲಿ ಯಾವುದೇ ಮನರಂಜನಾ ಕಾರ್ಯಕ್ರಮ, ಹಾಡು, ನೃತ್ಯ ಹಾಗೂ ಡಿಜೆಗೆ ನಿಷೇಧ ಹೇರಲಾಗಿದೆ. ನಗರದಲ್ಲಿ ವಾರ್ಡ್ ಗೆ ಒಂದು ಮತ್ತು ಗ್ರಾಮದಲ್ಲಿ ಒಂದು ಗಣೇಶ ಮೂರ್ತಿ ಕೂರಿಸಲು ಮಾತ್ರ ಅವಕಾಶ ನೀಡಲಾಗಿದೆ.ಶಾಲಾ - ಕಾಲೇಜುಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ನೀಡಲಾಗಿಲ್ಲ. ಗಣೇಶೋತ್ಸವ ಸ್ಥಳದಲ್ಲಿ ಯಾವುದೇ ಸಮಯದಲ್ಲಿ ಗರಿಷ್ಠ 20 ಜನ ಸೇರಲು ಮಾತ್ರ ಅವಕಾಶ ನೀಡಲಾಗಿದೆ.ಆಯೋಜಕರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವುದು ಮತ್ತು ಲಸಿಕೆ ಹಾಕಿಸಿಕೊಂಡಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 2ಗಿಂತ ಕಡಿಮೆಯಿದ್ದರೆ ಮಾತ್ರ ಜಿಲ್ಲಾಧಿಕಾರಿ ಅನುಮತಿ ನೀಡಬಹುದಾಗಿದೆ.