ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಮಾಡಲಗಿ ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ಮಹಿಳೆಯ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಮೂಡಿಸಿದೆ.
ಮೃತ ಮಹಿಳೆಯನ್ನು ಕಲ್ಲವ್ವಾ ಸದಾಶಿವ ಮರಡಿ ಎಂದು ಗುರುತಿಸಲಾಗಿದೆ. ಕಬ್ಬಿನ ಗದ್ದೆಯಲ್ಲಿ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಹಿಳೆಯ ಸಾವಿನ ಬಗ್ಗೆ ಕೊಲೆಯ ಶಂಕೆ ವ್ಯಕ್ತವಾಗಿದೆ ಆದರೆ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಬಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.
ಮಹಿಳೆಯ ಸಾವು ಕೊಲೆಯೇ ಅಥವಾ ಬೇರೆ ಯಾವುದೇ ಕಾರಣದಿಂದ ಸಂಭವಿಸಿದೆಯೇ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ. ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
