ಬೆಳಗಾವಿ : ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಶೀಘ್ರವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು
ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿರಂತರ ಮಳೆ ಸುರಿಯುತ್ತಿರುವುದರಿಂದ
ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಗುಂಡಿಗಳಲ್ಲಿ ನೀರು ತುಂಬಿ ರಸ್ತೆ ಕಾಣದೇ ಇರುವುದರಿಂದ ಕೆಲವು ಬಾರಿ ಅಪಘಾತಗಳು ಸಹ ಉಂಟಾಗಿವೆ. ಈ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳೂ ಸಹ ಬಂದಿವೆ.

ಈ ಹಿನ್ನೆಲೆಯಲ್ಲಿ ನಗರದ ಎಲ್ಲ ವಿಭಾಗಗಳ ಅಭಿಯಂತರಗಳು ಪಾಲಿಕೆ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು.
ಎಲ್ ಅಂಡ್ ಟಿ ಕಂಪನಿಯವರು ನೀರು ಸರಬರಾಜು ಪೈಪ್ ಲೈನ್ ಅಳವಡಿಕೆಗಾಗಿ ಅಗೆದಿರುವ ಗುಂಡಿಗಳನ್ನು ಮುಚ್ಚಿಲ್ಲ. ಕೆಲವು ಕಡೆಗೆ ಕಾಮಗಾರಿಗಳನ್ನು ಅರ್ಧಂಬರ್ಧ ಮಾಡಲಾಗಿದೆ. ಸ್ಥಳ ಪರಿಶೀಲನೆಗಾಗಿ ನಾನೇ ಖುದ್ದು ಭೇಟಿ ನೀಡಿದಾಗ ಈ ವಿಚಾರಗಳು ನನ್ನ ಗಮನಕ್ಕೆ ಬಂದಿದ್ದು , ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಿ ಗುಂಡಿಗಳನ್ನು ಮುಚ್ಚಬೇಕೆಂದು ಎಚ್ಚರಿಕೆ ನೀಡಿದರು. ಇಷ್ಟರಲ್ಲೇ ಗಣೇಶ ಹಬ್ಬವೂ ಕೂಡ ಬರುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಅಭಿಯಂತರಗಳು, ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಿ ಸಮಸ್ಯೆ ಬಗೆಹರಿಸಿ
ಸಾರ್ವಜನಿಕರ ದೂರುಗಳು ಬರೆದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

ಸಭೆಯಲ್ಲಿ ಪಾಲಿಕೆ ಅಭಿಯಂತರ ಲಕ್ಷ್ಮೀ ನಿಪ್ಪಾಣಿಕರ್, ಆನಂದ ದೇಶಪಾಂಡೆ, ಉತ್ತರ ವಿಭಾಗದ ಅಭಿಯಂತರ ಅನೂಪ ಕನೋಜ, ದಕ್ಷಿಣ ವಿಭಾಗದ ಅಭಿಯಂತರ ಸುರೇಶ ಮೂರ್ತೆಣ್ಣವರ, ಕೆಯುಡಬ್ಲ್ಯೂ ಎಸ್ ಕಾರ್ಯಪಾಲಕ ಅಭಿಯಂತರರಾದ ಅಶ್ವಿನಿ ಕಲಗುಟ್ಕರ್ ಹಾಗೂ ಎಲ್ ಅಂಡ್ ಟಿ, ಕೆಯುಐಡಿಎಫ್ಸಿ
ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು, ಅಭಿಯಂತರಗಳು, ಸಿಬ್ಬಂದಿ ಉಪಸ್ಥಿತರಿದ್ದರು,


Leave a Reply

Your email address will not be published. Required fields are marked *