ಅಪ್ರಾಪ್ತ ಮೇಲೆ ಅತ್ಯಾಚಾರ ಎಸಗಿದ 33 ಕಾಮುಕರು 23 ಜನರ ಬಂಧನ

ಅಪ್ರಾಪ್ತ ಮೇಲೆ ಅತ್ಯಾಚಾರ ಎಸಗಿದ 33 ಕಾಮುಕರು  23 ಜನರ ಬಂಧನ

14 ವರ್ಷದ ಬಾಲಕಿ ಮೇಲೆ ಮೇಲೆ 33 ಜನರು ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 23 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ 10 ಜನರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ರಾಜಕೀಯ ಪಕ್ಷಗಳ ಹಿನ್ನೆಲೆ ಉಳ್ಳವರು ಹಾಗೂ ಕಳೆದ 9 ತಿಂಗಳಿಂದ ನಿರಂತರವಾಗಿ ಕೃತ್ಯ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಪ್ರಾಪ್ತಿಗೆ ಬೇರೆ ವ್ಯಕ್ತಿಯ ಜೊತೆ ಅಕ್ರಮ ಸಂಬಂಧವಿತ್ತು ಹಾಗೂ ಆಕೆಯ ಅಶ್ಲೀಲ ವಿಡಿಯೋವನ್ನು ಆತ ಸೆರೆ ಹಿಡಿದಿದ್ದ. ಈ ವಿಡಿಯೋ ಇಟ್ಟುಕೊಂಡು ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿ, 33 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.