ಬೆಳಗಾವಿ: ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಶಾಸಕ ಆಸೀಫ್ ಸೇರ್ ಅವರಿಗೆ ರಾಜ್ಯ ಸರ್ಕಾರ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಅಧ್ಯಕ್ಷ ಸ್ಥಾನ ನೀಡಿ ಮಹತ್ವದ ಜವಾಬ್ದಾರಿ ವಹಿಸಿದೆ.

ಬುಡಾ ಅಧ್ಯಕ್ಷರಾಗಿದ್ದ ಲಕ್ಷ್ಮಣರಾವ್ ಚಿಂಗಳ ಅವರ ಸ್ಥಾನಕ್ಕೆ ಶಾಸಕ ಆಸೀಫ್ ಸೇರ್ ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಆಸೀಫ್ ಸೇರ್ ಅವರಿಗೆ ಇದೀಗ ಬುಡಾ ಅಧ್ಯಕ್ಷ ಸ್ಥಾನ ನೀಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಬೆಳಗಾವಿ ನಗರದ ಅಭಿವೃದ್ಧಿ ಹಾಗೂ ನಗರ ಯೋಜನೆಗೆ ಸಂಬಂಧಿಸಿದ ಪ್ರಮುಖ ಜವಾಬ್ದಾರಿ ಬುಡಾ ಅಧ್ಯಕ್ಷರ ಮೇಲಿದ್ದು, ಮುಂದಿನ ದಿನಗಳಲ್ಲಿ ಅವರ ಕಾರ್ಯವೈಖರಿ ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *