ಸರ್ಕಾರದ ಅನುಮೋದನೆ ಸಿಕ್ಕ ತಕ್ಷಣ ಅಧಿಸೂಚನೆ; 21 ಸಾವಿರ ಹಳೆಯ ಅರ್ಜಿದಾರರಿಗೆ ಮಹತ್ವದ ಮಾಹಿತಿ
ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ (DCC BANK)ನಲ್ಲಿ 140 ಖಾಲಿ ಹುದ್ದೆಗಳ ನೇಮಕಾತಿಗಾಗಿ ಪರಿಷ್ಕೃತ ಪ್ರಸ್ತಾವವನ್ನು ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಈ ಹಿಂದೆ 104 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಬರೋಬ್ಬರಿ 21 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಮೀಸಲಾತಿ, ಶೈಕ್ಷಣಿಕ ಅರ್ಹತೆ ಸೇರಿದಂತೆ ಕೆಲವು ತಾಂತ್ರಿಕ ಅಂಶಗಳಲ್ಲಿ ತಿದ್ದುಪಡಿ ಅಗತ್ಯವಾದ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ಪರಿಷ್ಕರಿಸಲಾಗಿದೆ.

ಪರಿಷ್ಕೃತ ಪ್ರಸ್ತಾವದಲ್ಲಿ ಮಹಿಳೆಯರು ಹಾಗೂ ವಿವಿಧ ವರ್ಗಗಳಿಗೆ ಮೀಸಲಾತಿ ಮತ್ತು ಹುದ್ದೆವಾರು ಶೈಕ್ಷಣಿಕ ಅರ್ಹತೆಗಳನ್ನು ಸರ್ಕಾರದ ನಿಯಮಗಳಂತೆ ನಿಗದಿಪಡಿಸಲಾಗಿದೆ.

📌 ಹಳೆಯ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ

ಈ ಹಿಂದೆ 104 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ 21 ಸಾವಿರ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅವರ ಹಳೆಯ ಅರ್ಜಿಗಳನ್ನು ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುವುದು ಎಂದು ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.
ಆದರೆ ಪರಿಷ್ಕೃತ ಮೀಸಲಾತಿ ಅಥವಾ ಅರ್ಹತೆಯನ್ವಯ ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವವರಿಗೆ ಹೊಸ ಅಧಿಸೂಚನೆಯ ಮೂಲಕ ಅವಕಾಶ ಕಲ್ಪಿಸಲಾಗುತ್ತದೆ.

ಸರ್ಕಾರದ ಅನುಮೋದನೆ ದೊರೆತ ನಂತರ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗುತ್ತದೆ. ಹುದ್ದೆವಾರು ಅರ್ಹತೆ, ಮೀಸಲಾತಿ ಹಾಗೂ ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗುವುದು

⚠️ ಅಧಿಕೃತ ಅಧಿಸೂಚನೆ ಪ್ರಕಟವಾಗುವವರೆಗೆ ಅಭ್ಯರ್ಥಿಗಳು ಯಾವುದೇ ವದಂತಿಗಳನ್ನು ನಂಬದೆ, ಅಧಿಕೃತ ಮಾಹಿತಿಯನ್ನು ಮಾತ್ರ ಪರಿಶೀಲಿಸುವುದು ಸೂಕ್ತ.

Leave a Reply

Your email address will not be published. Required fields are marked *