ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ಚಿಕ್ಕೋಡಿ ತಾಲೂಕಿನ ಯಕ್ಸಂಬಾಗೆ ಆಗಮಿಸಲಿರುವ ಅಮಿತ್ ಶಾ, ವೀರೇಶ್ವರ ಕೋ-ಆಪರೇಟಿವ್ ಸೊಸೈಟಿಯ ನೂತನ ಮುಖ್ಯ ಆಡಳಿತ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.
ಇದಕ್ಕೂ ಮುನ್ನ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಲ್ಲಿ ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, 1,200 ಹಾಸಿಗೆಗಳ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮಾರ್ಗದುದ್ದಕ್ಕೂ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ವಾಹನ ಸಂಚಾರ ಮತ್ತು ಸಾರ್ವಜನಿಕರ ಚಲನವಲನದ ಮೇಲೂ ನಿಗಾ ವಹಿಸಲಾಗಿದೆ.
