ಉಕ್ರೇನ್‌ನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ

ಉಕ್ರೇನ್‌ನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ

ಉಕ್ರೇನ್‌ನಲ್ಲಿ ರಷ್ಯಾ ದಾಳಿಗೆ ಹಾವೇರಿಯ ವಿದ್ಯಾರ್ಥಿ ಬಲಿಯಾದ ಬಳಿಕ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಬಲಿಯಾಗಿರುವ ಕುರಿತು ವರದಿಯಾಗಿದೆ. ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ. ಇಂದು ಭಾರತದ ಮತ್ತೋರ್ವ ವಿದ್ಯಾರ್ಥಿ ಬ್ರೆನ್ ಸ್ಟೋಕ್‌ನಿಂದಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.ಉಕ್ರೇನ್‌ನ ವಿನ್ನಿಟ್ರಿಯಾ ನ್ಯಾಷನಲ್ ಪೈರೋಗೋವ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡ್ತಿದ್ದ ಚಂದನ್ ಜಿಂದಾಲ್(22) ಸಾವನ್ನಪ್ಪಿದ್ದಾರೆ.ಲಭ್ಯವಾಗಿರುವ ಮಾಹಿತಿ ಪ್ರಕಾರ ಚಂದನ್,ಬ್ರೆನ್ ಸ್ಟೋಕ್‌ನಿಂದ ಬಳುಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಸಾವನ್ನಪ್ಪಿದ್ದಾಗಿ ವರದಿಯಾಗಿದೆ.ಚಂದನ್ ಮೃತದೇಹವನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಈಗಾಗಲೇ ಉಕ್ರೇನ್ ರಾಯಭಾರ ಕಚೇರಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.ಚಂದನ್ ಪಂಜಾಬ್ ಮೂಲದ ವಿದ್ಯಾರ್ಥಿ ಎಂದು ತಿಳಿದುಬಂದಿದೆ.