ಚಿನ್ನ ಸಾಗಿಸುತ್ತಿದ್ದ ಇಬ್ಬರು ಖದೀಮರ ಬಂಧನ

ಚಿನ್ನ ಸಾಗಿಸುತ್ತಿದ್ದ ಇಬ್ಬರು ಖದೀಮರ ಬಂಧನ

ಬಾಯಿಯಲ್ಲಿ 951 ಗ್ರಾಂ ಚಿನ್ನ ಇಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಉಜೇಕಿ ಪ್ರಜೆಗಳನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.ದುಬೈನಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದವರ ತಪಾಸಣೆ ವೇಳೆ ಇಬ್ಬರು ಉಜೇಕಿ ಪ್ರಜೆಗಳ ಬಾಯಲ್ಲಿ ಚಿನ್ನವಿರುವುದು ಪತ್ತೆಯಾಗಿದೆ. ಖದೀಮರನ್ನು ಪೊಲೀಸರು, ವಿಚಾರಣೆಗೊಳಪಡಿಸಿದ್ದು, ಬಂಧಿತರಿಂದ 951 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.