ಬೆಳಗಾವಿಯಲ್ಲಿ ಆನೆಕ್ಸ ಕಟ್ಟಡ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿ ಆನೆಕ್ಸ ಕಟ್ಟಡ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿನ ಆನೆಕ್ಸ್ ಕಟ್ಟಡವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು.ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಎರಡು ಕೋಟಿ ವೆಚ್ಚದಲ್ಲಿ ಸಂಸತ್ತ ಮಾದರಿಯಲ್ಲಿ ನಿರ್ಮಿಸಿರುವ ಆನೆಕ್ಸ್ ಕಟ್ಟಡವನ್ನು ಮಂಗಳವಾರ ಸಿಎಂ ಬೊಮ್ಮಾಯಿ ಅವರು ಉದ್ಘಾಟಿಸಿದರು. ಇದಾದ ಬಳಿಕ ಮಹಿಳಾ ಕ್ರೀಡಾ ವಸತಿ ನಿಲಯ, ಒಳಗಾಂಗಣ ಕ್ರೀಡಾಂಗಣ, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ ಹೈಟೆಕ್ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಈ ವೇಳೆ ಸಿಎಂ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಉತ್ತರ ಶಾಸಕ ಅನಿಲ್ ಬೆನಕೆ ಸಾಥ್ ನೀಡಿದರು.