ದಾವೋಸ್‍ನಲ್ಲಿ ಉದ್ಯಮಿ ಗೌತಮ್ ಅದಾನಿ ಭೇಟಿಯಾದ ಸಿಎಂ ಬೊಮ್ಮಾಯಿ

ದಾವೋಸ್‍ನಲ್ಲಿ ಉದ್ಯಮಿ ಗೌತಮ್ ಅದಾನಿ ಭೇಟಿಯಾದ ಸಿಎಂ ಬೊಮ್ಮಾಯಿ

ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.ದಾವೋಸ್‍ನಲ್ಲಿ ವಿವಿಧ ಉದ್ಯಮಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಇಂದು ಉದ್ಯಮಿ ಗೌತಮ್ ಅದಾನಿ ಭೇಟಿಯಾಗಿ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿಕೊಂಡರು.ಈ ವೇಳೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ.ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.