ಕ್ರಿಸ್ಮಸ್, ಹೊಸ ವರ್ಷಾಚರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು

ಕ್ರಿಸ್ಮಸ್, ಹೊಸ ವರ್ಷಾಚರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು

ಕ್ರಿಸ್‍ಮಸ್ ಮತ್ತು ಹೊಸ ವರ್ಷಾಚರಣೆ ಬಹಿರಂಗ ಸಂಭ್ರಮಾಚರಣೆಗೆ ನಿಬರ್ಂಧ ವಿಧಿಸಲಾಗಿದ್ದು. ಡಿ.30ರಿಂದ ಜನವರಿ 2 ತನಕ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಡಿಜೆಗೆ ಅವಕಾಶ ಇಲ್ಲ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತೆ ರಾಜ್ಯಾದ್ಯಂತ ಯಾವುದೇ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ಇಲ್ಲ. ಬಾರ್ ಮತ್ತು ರೆಸ್ಟೋರೆಂಟ್‍ನಲ್ಲಿ 50% ಜನರಿಗೆ ಅವಕಾಶ. ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಲಸಿಕೆ ಕಡ್ಡಾಯಗೊಳಿಸಲಾಗಿದೆ. ಇನ್ನು ಕ್ರಿಸ್ ಮಸ್ ಆಚರಣೆಗೆ ಯಾವುದೇ ನಿμÉೀಧ ಇಲ್ಲ, ಅಂತರ ಕಾಪಾಡುವಂತೆ ಮನವಿ ಮಾಡಿಕೊಂಡರು.