ಕೋವಿಡ್ ಅಂಕಿಅಂಶ: ರಾಜ್ಯದಲ್ಲಿಂದು 1213 ಮಂದಿಗೆ ಸೋಂಕು ದೃಢ

Covidi Statistics: 1213 people infected in the state

ಕೋವಿಡ್ ಅಂಕಿಅಂಶ: ರಾಜ್ಯದಲ್ಲಿಂದು 1213 ಮಂದಿಗೆ ಸೋಂಕು ದೃಢ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1213 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 25 ಮಂದಿ ಅಸುನೀಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 319 ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ 1206 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 205 ಮಂದಿ ಡಿಸ್ಟಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,300ಕ್ಕೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 7343 ಸಕ್ರಿಯ ಪ್ರಕರಣಗಳಿವೆ.