ಹಿಜಾಬ್ ತೀರ್ಪಿನಿಂದ ಅಸಮಾಧಾನ: ನಾಳೆ ಕರ್ನಾಟಕ ಬಂದ್‌ಗೆ ಕರೆ

ಹಿಜಾಬ್ ತೀರ್ಪಿನಿಂದ ಅಸಮಾಧಾನ: ನಾಳೆ ಕರ್ನಾಟಕ ಬಂದ್‌ಗೆ ಕರೆ

ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾಗಿದೆ. ಕೋರ್ಟ್ ತೀರ್ಪಿನ ವಿರುದ್ಧ ಅಸಮಾಧಾನಗೊಂಡಿರುವ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ ಘೋಷಣೆ ಮಾಡಿದ್ದಾರೆ. ನಾಳೆ ಇಡೀ ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ.ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.ಯಾರ ಮೇಲೂ ಒತ್ತಾಯ ಹೇರಿ ಬಂದ್ ನಡೆಸದಿರುವಂತೆ ಒತ್ತಾಯಿಸಿದ್ದಾರೆ.