ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ

ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ

ಕೇಂದ್ರ ಸರ್ಕಾರ ಈಗಾಗಲೇ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದು, ಸಂಸತ್ ಚಳಿಗಾಲದ ಅಧಿವೇಶನದಲ್ಲಿ ನಾಳೆ ಮಸೂದೆ ಮಂಡಿಸಲಿದೆ. ರೈತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಹೊಸ ಸಮಿತಿಯನ್ನು ರಚಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಪಾರದರ್ಶಕತೆ, ಬಹುಬೆಳೆ ಪದ್ಧತಿಗೆ ಉತ್ತೇಜನ ನೀಡುವುದು, ಶೂನ್ಯ ಬಂಡವಾಳ ಕೃಷಿಗೆ ಪ್ರೋತ್ಸಾಹ ನೀಡುವುದು ಮೊದಲಾದ ರೈತರ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.