ಗೋಹತ್ಯೆ ನಿಷೇಧ ಕಾಯ್ದೆ: ನವೆಂಬರ್ 15 ರಂದು ಅಂತಿಮ ವಿಚಾರಣೆ

ಗೋಹತ್ಯೆ ನಿಷೇಧ ಕಾಯ್ದೆ: ನವೆಂಬರ್ 15 ರಂದು ಅಂತಿಮ ವಿಚಾರಣೆ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020 (ಗೋಹತ್ಯೆ ನಿಷೇಧ ಕಾಯ್ದೆ) ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ನವೆಂಬರ್ 15 ಕ್ಕೆ ಹೈಕೋರ್ಟ್‌ ನಿಗದಿಪಡಿಸಿದೆ.ಗೋಹತ್ಯೆ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಆರಿಫ್ ಜಮೀಲ್, ಕಸಾಯಿ ಖಾನೆ ಮಾಲೀಕರು ಮತ್ತು ಗೋಮಾಂಸ ಮಾರಾಟಗಾರರು ಹೈಕೋರ್ಟ್ ಗೆ ಪ್ರತ್ಯೇಕ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನೆವಂಬರ್ 15ಕ್ಕೆ ಅಂತಿಮ ವಿಚಾರಣೆ ನಿಗದಿ ಮಾಡಿದೆ.