ರಾಜ್ಯದಲ್ಲಿ ಸೆ.12ರವರೆಗೂ ಭಾರೀ ಮಳೆ

ರಾಜ್ಯದಲ್ಲಿ ಸೆ.12ರವರೆಗೂ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಸೆಪ್ಟೆಂಬರ್ 12ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಛತ್ತೀಸ್‌ಗಢದಲ್ಲೂ ವಿಪರೀತ ಮಳೆಯಾಗುವ ಸಾಧ್ಯತೆಯಿದೆ.ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಇಂದು (ಸೆ.08) ಕರಾವಳಿ ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆ.10 ಮತ್ತು 11ರಂದು ಕರಾವಳಿ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ.