ಹಿಜಾಬ್ ವಿವಾದ : ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಹಿಜಾಬ್ ವಿವಾದ : ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಹಿಜಾಬ್ ಮುಸಲ್ಮಾನರ ಅತ್ಯಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದಿರುವ ರಾಜ್ಯ ಹೈಕೋರ್ಟ್‌ ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ವಿದ್ಯಾರ್ಥಿನಿಯರು, ಮುಸ್ಲಿಂ ಸಂಘಟನೆಗಳು ಹಾಗೂ ರಾಜ್ಯವಕ್ಸ್‌ ಬೋರ್ಡ್ ನಿರ್ಧರಿಸಿದೆ ಎಂಬ ಮಾಹಿತಿ ದೊರೆತಿದೆ. ಈ ಸಂಬಂಧ ಚರ್ಚಿಸಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.ರಾಜ್ಯ ವಕ್ಸ್‌ ಬೋರ್ಡ್ ಅಧ್ಯಕ್ಷ ಶಾಫಿ ಸ ಅದಿ ಈ ಸಂಬಂಧ ಹೇಳಿಕೆ ನೀಡಿದ್ದಾರೆ.ಸುದೀರ್ಘ ವಿಚಾರಣೆ ಬಳಿಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಎತ್ತಿ ಹಿಡಿದು ರಾಜ್ಯ ಹೈಕೋರ್ಟ್ ಇಂದು ತೀರ್ಪು ನೀಡಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಉಡುಪಿ ಬಾಲಕಿಯರ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಸಲ್ಲಿಸಿದ್ದರಿಟ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.