ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್

ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್

ದೆವ್ವಕ್ಕೆ ಹೆದರಿ ಪೊಲೀಸ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಲ್ಲಕುರಿಚಿ ಜಿಲ್ಲೆಯ ಪೆರುಂಬಕ್ಕಂ ನಿವಾಸಿ ಪ್ರಭಾಕರನ್ ಮೃತ ಪೊಲೀಸ್. ಇವರು ಕಡಲೂರಿನ ಸಶಸ್ತ್ರ ಪೊಲೀಸ್ ಠಾಣೆಯ ಕ್ವಾರ್ಟಸ್‌್ರನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ವಿಷ್ಣುಪ್ರಿಯಾ ಮಗ ಮತ್ತು ಮಗಳ ಜೊತೆ ಪ್ರಭಾಕರನ್ ಪೊಲೀಸ್ ಕ್ವಾರ್ಟಸ್್ರ ನಲ್ಲಿ ವಾಸಿಸುತ್ತಿದ್ದರು. ಪ್ರಭಾಕರನ್ ಅವರು ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟ ಮಹಿಳೆಯೊಬ್ಬರು ಕತ್ತು ಹಿಸುಕಲು ಪ್ರಯತ್ನಿಸುತ್ತಿರುವುದನ್ನು ನೋಡುತ್ತಿರುವುದಾಗಿ ಹೇಳಿಕೊಂಡಿದ್ದರಂತೆ. ಪ್ರತಿ ದಿನ ಮಹಿಳೆ ಬಂದು ನನ್ನನ್ನು ಸಾಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರಂತೆ.ಇದೇ ಭಯದಿಂದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಪ್ರಭಾಕರನ್ ಅವರು ವಾಸಿಸುತ್ತಿದ್ದ ಪೊಲೀಸ್ ಕ್ವಾರ್ಟಸ್್ರ ಪರಿಸರದಲ್ಲಿ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಪ್ರೇತವೇ ಪ್ರಭಾಕರನ್ ಅವರನ್ನು ಕಾಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.