ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ವಿಪಕ್ಷ ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧ, ಗದ್ದಲದ ನಡುವೆಯೂ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿಂದು ಅಂಗೀಕಾರವಾಗಿದೆ.14 ಸೆಕ್ಷನ್ ಗಳನ್ನೊಳಗೊಂಡ ವಿಧೇಯಕ ಇದಾಗಿದೆ. ವಿಧಾನಸಭೆಯಲ್ಲಿ ವಿಧೇಯಕದ ಬಗ್ಗೆ ಸುದೀರ್ಘ ಚರ್ಚೆ ಬಳಿಕ ಸ್ಪೀಕರ್ ಕಾಗೇರಿ ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಮಸೂದೆ ಬಗ್ಗೆ ಇನ್ನಷ್ಟು ಚರ್ಚೆಗೆ ಅವಕಾಶ ನೀಡಬೇಕು, ಕಾಯ್ದೆ ಜಾರಿಗೆ ನಮ್ಮವಿರೋಧವಿದೆ. ಎಂದು ಸದನದ ಬಾವಿಗಿಳಿದು ಗದ್ದಲ ನಡೆಸಿದರು. ಕಾಂಗ್ರೆಸ್ ಸದಸ್ಯರ ಗದ್ದಲದ ನಡುವೆಯೂ ವಿಧಾನಸಭೆಯ ಹೆಚ್ಚಿನ ಸದಸ್ಯರು ಮಸೂದೆ ಪರವಾಗಿ ಮತಹಾಕಿದ್ದು,ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ದೊರೆತಿದೆ ಎಂದು ಸ್ಪೀಕರ್ ತಿಳಿಸಿದರು. ಕಾಂಗ್ರೆಸ್ ಸದಸ್ಯರು ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆ 10 ನಿಮಿಷಗಳ ಕಾಲ ಸದನದ ಕಲಾಪವನ್ನು ಮುಂದೂಡಿ ಸ್ಪೀಕರ್ ಆದೇಶ ಹೊರಡಿಸಿದರು.