ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ನಿಧನ..!

ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ನಿಧನ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ ಅವರಿಗೆ ಹೃದಯಾಘಾತ ಉಂಟಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಜಿಮ್ ನಲ್ಲಿ ವರ್ಕ್‌ಔಟ್ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪುನೀತ್ ಇಹಲೋಕ ತ್ಯಜಿಸಿದ್ದಾರೆ. ತಮ್ಮನೆಚ್ಚಿನ ನಟನ ನಿಧನಕ್ಕೆ ಅಪಾರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.