ಕರ್ನಾಟಕಕ್ಕೆ 135.92 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಕರ್ನಾಟಕಕ್ಕೆ 135.92 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೇಂದ್ರ ಹಣಕಾಸು ಸಚಿವಾಲಯ 6ನೇ ಕಂತಿನಲ್ಲಿ 135.92 ಕೋಟಿ ರೂ. ಅನುದಾನವನ್ನು ರಾಜ್ಯಕ್ಕೆ ನೀಡಿದೆ. ಕೇಂದ್ರ ಹಣಕಾಸು ಸಚಿವಾಲಯದಿಂದ ಆರನೇ ತಿಂಗಳ ಪೋಸ್ಟ್ ಡೆವೊಲ್ಯೂಷನ್ ರೆವೆನ್ಯೂಡೆಫಿಸಿಟ್ (PDRD)ನ ಹಣ ರಿಲೀಸ್ ಮಾಡಿದೆ. ಸೆಪ್ಟೆಂಬರ್ ತಿಂಗಳ ಮೊತ್ತವಾಗಿ ಒಟ್ಟು 9,871 ಕೋಟಿ ರೂ. ಬಿಡುಗಡೆ ಆಗಿದ್ದು, ಕರ್ನಾಟಕಕ್ಕೆ 135.92 ಕೋಟಿ ರೂಪಾಯಿ ಸಿಗಲಿದೆ. ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಪ್ರಸಕ್ತ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರದಿಂದ ಒಟ್ಟು 59,226 ಕೋಟಿ ರೂಪಾಯಿ ಬಿಡುಗಡೆ ಆಗಿದ್ದು, ಈ ಬಾರಿ ಆಂಧ್ರಪ್ರದೇಶ, ಅಸ್ಸಂ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರಾಖಂಡ ಹಾಗೂ ಪಶ್ಚಿಮ ಬಂಗಾಳಕ್ಕೆ ಅನುದಾನ ಸಿಕ್ಕಿದೆ.ಕೇಂದ್ರ ಸರ್ಕಾರದಿಂದ ಸಿಕ್ಕಿರುವ ಅನುದಾನದಲ್ಲಿ ಇಲ್ಲಿಯವರೆಗೆ ಕೇರಳ ಅತಿ ಹೆಚ್ಚು ಅಂದರೆ 9945.50 ಕೋಟಿ ರೂ ಪಡೆದುಕೊಂಡಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ 8,628.50 ಕೋಟಿ ರೂ ಪಡೆದುಕೊಂಡಿದೆ.