ಮುಂಬೈ ರೇಪ್ ಪ್ರಕರಣ ಸಂತ್ರಸ್ತ ಸಾವು

ಮುಂಬೈ ರೇಪ್ ಪ್ರಕರಣ ಸಂತ್ರಸ್ತ ಸಾವು

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ರಾಜವಾಡಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು (ಸೆ.11) ಮೃತಪಟ್ಟಿದ್ದಾರೆ. 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ ಗುಪ್ತಾಂಗಕ್ಕೆ ರಾಡ್ ಹಾಕಿ, ತಲೆಗೆ ರಾಡ್‌ನಿಂದ ಹೊಡೆದು ವಿಕೃತಿ ಮೆರೆದಿದ್ದನು.ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಮಹಿಳೆಯನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು.ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಮೋಹನ್ ಚವ್ಹಾಣ್ (45)ನನ್ನು ಸಾಕಿನಾಕಾ ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಂತ್ರಸ್ತೆ ಮೃತಪಟ್ಟಿದ್ದಾರೆ.