ಅಂಬೇವಾಡಿಯಲ್ಲಿ ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆಗೆ ಶರಣು

ಅಂಬೇವಾಡಿಯಲ್ಲಿ ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆಗೆ ಶರಣು

ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಮಹಿಳೆಯೊರ್ವಳು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹೌದು ನಿನ್ನೆ ಸಾಯಂಕಾಲ ಈ ಘಟನೆ ಸಂಭವಿಸಿದ್ದು. ಲಲಿತಾ ಬಾಬು ಕೋವಾಡ್ಕರ್(55) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಮಹಿಳೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ತುರ್ತು ಸಂರಕ್ಷಣಾ ಸಹಾಯವಾಣಿ ಸಂಸ್ಥೆಯ ಸದಸ್ಯರು ಕಾರ್ಯಾಚರಣೆ ನಡೆಸಿ 126 ಅಡಿ ಬಾವಿಯಿಂದ ಆ ಮಹಿಳೆಯ ಶವವನ್ನು ಹೊರ ತೆಗೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ತುರ್ತು ಸಂರಕ್ಷಣಾ ಸಹಾಯವಾಣಿ ಸಂಸ್ಥೆಯ ಬಸವರಾಜ ಹಿರೇಮಠ, ವೈಭವ ಪಾಟೀಲ, ರಾಜು ಟಕ್ಕೇಕರ ಶವ ಹೊರ ತೆಗೆಯಲು ಶ್ರಮಿಸಿದ್ದಾರೆ. ಇನ್ನು ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದು. ಮಹಿಳೆಯ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರ ಬರಬೇಕಿದೆ. ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.